Thursday, April 18, 2024
spot_imgspot_img
spot_imgspot_img

ನವದೆಹಲಿ: ಕೊರೊನಾ ಕಂಟಕ; 24 ಗಂಟೆಯಲ್ಲಿ 1341 ಸಾವು 2,34,692 ಪಾಸಿಟಿವ್!

- Advertisement -G L Acharya panikkar
- Advertisement -

ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಕಳೆದ 24 ಗಂಟೆಯಲ್ಲಿ 2,34,692 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,341 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,75,649ಕ್ಕೆ ಏರಿಕೆಯಾಗಿದೆ.

driving

ಇನ್ನು ದೇಶದಲ್ಲಿ 16,79,740 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,26,71,220 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,23,354 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 14,95,397 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 26,49,72,022 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 11,99,37,641 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!