Monday, June 22, 2026
spot_imgspot_img
spot_imgspot_img

24 ಗಂಟೆಗಳಲ್ಲಿ 3.68 ಲಕ್ಷ ಕೊರೋನಾ ಪ್ರಕರಣಗಳು ಪತ್ತೆ!

- Advertisement -
- Advertisement -

ನವದೆಹಲಿ:  ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು,ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದೆ. ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 3,68,147 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,417 ಮಂದಿ ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,18,959ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,13,642ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,00,732 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 16,29,3003ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 15,04,698 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 29,16,47,037 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

driving

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15,71,98,207 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

- Advertisement -

Related news

error: Content is protected !!