Sunday, July 6, 2025
spot_imgspot_img
spot_imgspot_img

ಬಟ್ಟೆಗಳ ರಾಶಿಗೆ ಬೆಂಕಿ- 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ!

- Advertisement -
- Advertisement -

ನವದೆಹಲಿ: ಕಾರ್ಖಾನೆಯಲ್ಲಿರುವ ಬಟ್ಟೆಗಳ ರಾಶಿಗೆ ಬೆಂಕಿ ಹತ್ತಿಕೊಂಡು ಬಳಿಕ ಹತ್ತಿರದಲ್ಲಿದ್ದ 20ಕ್ಕೂ ಹೆಚ್ಚು ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ತಾಗಿ ಸುಟ್ಟು ಭಸ್ಮವಾಗಿರುವ ಘಟನೆ ನವದೆಹಲಿಯ ಹರಿಕೇಶ್ ನಗರ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.

ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸುತ್ತಮುತ್ತಲೂ ಇದ್ದ ಗುಡಿಸಲುಗಳಿಗೆ ಬೆಂಕಿ ಹರಡಿದೆ. 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬಟ್ಟೆಗಳ ರಾಶಿಗೆ ಮೊದಲು ಬೆಂಕಿ ಹೊತ್ತಿಕೊಂಡಿದೆ ನಂತರ ಸುತ್ತಮುತ್ತಲೂ ಬೆಂಕಿ ಆವರಿಸಿಕೊಂಡಿದೆ. ಸ್ಥಳದ ಆಸುಪಾಸಿನಲ್ಲಿ 20 ರಿಂದ 22 ಗುಡಿಸಲುಗಳನ್ನು ಹಾಕಿಕೊಂಡು ಕಾರ್ಮಿಕರು ವಾಸ ಮಾಡುತ್ತಿದ್ದರು. ಆ ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ಆ ಜಾಗದಲ್ಲಿ ನಿಂತಿದ್ದ ಟ್ರಕ್‍ಗೂ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಗುಡಿಸಿಲಿಗೆ ತಾಗಿರುವ ಪರಿಣಾಮ 30ರಿಂದ 40 ಜನರು ಬೆಂಕಿಯಲ್ಲಿ ಸಿಲುಕಿದ್ದರು. ಅವರನ್ನು ರಕ್ಷಿಸಿ, ಹೊರಗೆ ಕರೆತರಲಾಗಿದೆ. 26ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!