Wednesday, April 24, 2024
spot_imgspot_img
spot_imgspot_img

ಭಾರತದಲ್ಲಿಂದು 3.46ಲಕ್ಷ ಕೊರೊನಾ ಕೇಸ್ ಪತ್ತೆ!

- Advertisement -G L Acharya panikkar
- Advertisement -

ನವದೆಹಲಿ: ಶನಿವಾರ ಭಾರತದಲ್ಲಿ ವಿಶ್ವದಾಖಲೆ ಸೃಷ್ಟಿಸಿದ್ದ ಕೊರೋನಾ ವೈರಸ್ ಸ್ಫೋಟ ಮುಂದುವರೆಸಿದ್ದು, ಸತತ 4ನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.

ಶನಿವಾರ ಒಂದೇ ದಿನ 3,46,786 ಪ್ರಕರಣಗಳು ದಾಖಲಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,624 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,89,544ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,52,940ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,19,838 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,38,67,997ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 17,53,569 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,61,99,222 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 13,83,79,832 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

- Advertisement -

Related news

error: Content is protected !!