Tuesday, July 21, 2026
spot_imgspot_img
spot_imgspot_img

ನವದೆಹಲಿ: ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

- Advertisement -
- Advertisement -

ನವದೆಹಲಿ: ಇಬ್ಬರು ಸಿಬ್ಬಂದಿ ಸೇರಿದಂತೆ 5 ಜನರನ್ನು ಹೊತ್ತೊಯ್ಯುತ್ತಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅಂಡಮಾನ್ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಪೋರ್ಟ್‌ಬ್ಲೇರ್‌ನಿಂದ ಟೇಕ್ ಆಫ್ ಆಗಿ ಮಾಯಾಬಂದರ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಯಾಬಂದರ್ ಬಳಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಯಿತು ಎಂದು ಪವನ್ ಹನ್ಸ್ ವಕ್ತಾರರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಪೋರ್ಟ್‌ಬ್ಲೇರ್‌ನಿಂದ ಇಬ್ಬರು ಸಿಬ್ಬಂದಿ ಮತ್ತು ಐದು ಪ್ರಯಾಣಿಕರೊಂದಿಗೆ ಹೊರಟಿತ್ತು. ಎಲ್ಲರೂ ಸುರಕ್ಷಿತವಾಗಿದ್ದಾರೆ, ಯಾವುದೇ ಪ್ರಾಣಾಪಾಯವಿಲ್ಲ ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!