Monday, July 20, 2026
spot_imgspot_img
spot_imgspot_img

ನವದೆಹಲಿ: ಹೊಸ ವರ್ಷಕ್ಕೆ ದೇಶದ ಜನತೆಗೆ ಆರೋಗ್ಯ, ಸಮೃದ್ಧಿ ತರಲಿ ಎಂದು ಶುಭಕೋರಿದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ ಶುಭಾಶಯಗಳು. ​ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸಂಭ್ರಮದ ಸಂದರ್ಭದಲ್ಲಿ, ದೇಶ ಮತ್ತು ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.

- Advertisement -

Related news

error: Content is protected !!