Saturday, April 20, 2024
spot_imgspot_img
spot_imgspot_img

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3.53 ಲಕ್ಷ ಜನರು ಕೋವಿಡ್ ನಿಂದ ಗುಣಮುಖ!

- Advertisement -G L Acharya panikkar
- Advertisement -

ನವದೆಹಲಿ: ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,26,098 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,890 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,66,207ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 36,73,802 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,04,32,898 ಸೋಂಕಿತರು ಗುಣಮುಖರಾಗಿದ್ದು, ಕಳೆದ 24 ಗಂಟೆಯಲ್ಲಿ 3,53,299 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 16,93,093 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 31,30,17,193 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 118,04,57,579 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

- Advertisement -

Related news

error: Content is protected !!