- Advertisement -
- Advertisement -
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆಯೇ ಯಧುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ರಾಜಮನೆತನದಲ್ಲಿ ದಸರಾ ಸಂಭ್ರಮ ಮತ್ತಷ್ಟು ಕಳೆ ನೀಡಿದೆ.
ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ ಎಂದು ವರದಿಯಾಗಿದೆ.
- Advertisement -