


ನೂತನ ಸಂಸದೆ ಆಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್‌ರವರಿಗೆ ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ! ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ.
ದೆಹಲಿಗೆ ಪ್ರಯಾಣ ಬೆಳೆಸಲು ಕಂಗನಾ ಚಂಡೀಗಢ ವಿಮಾನ ನಿಲ್ದಾಣಕ್ಕೆ ಮದ್ಯಾಹ್ನ 3.30 ರ ಸುಮಾರಿಗೆ ಆಗಮಿಸಿದ್ದರು. ಈ ವೇಳೆ ಭದ್ರತಾ ತಪಾಸಣೆ ಮಾಡುತ್ತಿದ್ದ ಮಹಿಳಾ ಸಿಐಎಸ್‌ಎಫ್ ಸಿಬ್ಬಂದಿ ಜೊತೆ ಕಿರಿಕ್ ನಡೆದಿದೆ. ಸಿಐಎಸ್‌ಎಫ್‌ನ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರು ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕಂಗನಾ ಇದು ರೈತರ ಆಂದೋಲನದ ವಿರುದ್ಧ ತಾನು ಮಾತನಾಡಿದ ಕೋಪದಿಂದ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ದೆಹಲಿಯ ಹಿರಿಯ ಅಧಿಕಾರಿಗಳಿಗೆ ಕಂಗನಾ ದೂರು ನೀಡಿದ ಹಿನ್ನಲೆಯಲ್ಲಿ ಕುಲ್ವಿಂದರ್ ಕೌರ್ ಅವರನ್ನು ಕಮಾಂಡಿಗ್ ಆಫೀಸರ್ ಬಂಧಿಸಿದ್ದಾರೆ. ಘಟನೆಯ ಕುರಿತು ಕೌರ್ ಅವರಿಂದ ಮಾಹಿತಿ ಪಡೆಯಲಾಗಿದ್ದು, ಘಟನಾ ಸ್ಥಳದಲ್ಲಿದ್ದ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರೀಶೀಲನೆ ನಡೆಸಿದ್ದಾರೆ. ಇದೊಂದು ಗಂಭೀರ ಆರೋಪವಾಗಿ ಪರಿಗಣಿಸಿದ ಸಿಐಎಸ್ಎಫ್ ಅಧಿಕಾರಿಗಳು ತನಿಖಾ ಸಮಿತಿ ರಚಿಸಿ ತನಿಖೆ ನಡೆಸುತ್ತಿದ್ದಾರೆ.
2024 ರ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಂಗನಾ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ರನೌತ್ ಅವರು ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ನಿರ್ಣಾಯಕ ಗೆಲುವು ಸಾಧಿಸಿದ್ದಾರೆ.