Friday, May 17, 2024
spot_imgspot_img
spot_imgspot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ನೂತನ ಅಧಿಕಾರಿ ಯೇಸುರಾಜ್ ಕ್ರಿಶ್ಚಿಯನ್ ಧರ್ಮದವರಲ್ಲ – ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಸ್ಪಷ್ಟನೆ

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೂತನವಾಗಿ ನೇಮಕವಾಗಿರುವ ಎಸ್.ಜೆ. ಯೇಸುರಾಜ್ ಅವರ ಧರ್ಮದ ಕುರಿತಂತೆ ಇದ್ದ ವಿವಾದಕ್ಕೆ ತೆರೆ ಬಿದ್ದಿದೆ.

ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ ಎಂದು ಹೆಸರಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಎಸ್.ಜೆ. ಯೇಸುರಾಜ್ ಎಂಬವರನ್ನು ನೇಮಕ ಮಾಡಲಾಗಿತ್ತು. ರಾಮನಗರ ಜಿಲ್ಲಾ ಮುಜರಾಯಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೇಸುರಾಜ್ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಓ ಆಗಿ ನೇಮಕ ಮಾಡಿರುವುದು ಚರ್ಚೆಗೂ ಕಾರಣವಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ. ಹಿಂದೂ ಸಂಘಟನೆಗಳು ಆಕ್ರೋಶಕ್ಕೂ ಕಾರಣವಾಗಿದ್ದು, ರಾಜ್ಯ ಸರಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ಯೇಸುರಾಜ್ ಎನ್ನುವ ಹೆಸರಿನ ಕಾರಣಕ್ಕೆ ಅನ್ಯ ಧರ್ಮದವರನ್ನು ಹಿಂದುಗಳ ದೇವಸ್ಥಾನಕ್ಕೆ ನೇಮಕ ಮಾಡಿದ್ದಾರೆಂದು ಹಿಂದು ಸಂಘಟನೆಗಳ ನಾಯಕರು ಆಕ್ಷೇಪಿಸಿದ್ದರು. ಅವರ ಧರ್ಮದ ಹಿನ್ನೆಲೆಯ ಬಗ್ಗೆ ಪ್ರಶ್ನೆಯನ್ನೂ ಮಾಡಿದ್ದರು. ಈ ವಿಚಾರ ಆಕ್ಷೇಪಕ್ಕೆ ಗುರಿಯಾದ ಬೆನ್ನಲ್ಲೇ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರು ಇವರು ಸ್ಪಷ್ಟನೆಯನ್ನು ನೀಡಿದ್ದಾರೆ. ದಾಖಲಾತಿ ಹಾಗೂ ನೇಮಕಾತಿ ಸಂದರ್ಭದಲ್ಲಿ ಹಾಜರು ಪಡಿಸಿರುವ ದಾಖಲಾತಿಗಳಂತೆ ಇವರು ಹಿಂದೂ ಧರ್ಮಕ್ಕೆ ಸೇರಿದವರಾಗಿರುತ್ತಾರೆ ಎಂದು ಸ್ಪಷ್ಟ ಪಡಿಸಿದೆ.

- Advertisement -

Related news

error: Content is protected !!