- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ 2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT) ರಾಜ್ಯ ಸರ್ಕಾರ ಹೊಸ ಮುಖ್ಯಸ್ಥರನ್ನು ನೇಮಕ ಮಾಡಿ ಇಂದು ತಿದ್ದುಪಡಿ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶ ಸಂಖ್ಯೆ ಹೆಚ್.ಡಿ 228 ಸಿಒಡಿ 2026, ದಿನಾಂಕ 24.09.2026 ರ ಆದೇಶಕ್ಕೆ ತಿದ್ದುಪಡಿ ತಂದು, ಅ. 30 ರಂದು ಹೊಸ ಆದೇಶ ಪ್ರಕಟಿಸಲಾಗಿದೆ.
ಬೆಂಗಳೂರಿನ ಸಿಐಡಿ ಐಜಿಪಿ ಆಗಿರುವ ಚೇತನ್ ಸಿಂಗ್ ರಾಥೋಡ್ ಅವರನ್ನು ಎಸ್ಐಟಿ ನೂತನ ಮುಖ್ಯಸ್ಥರನ್ನಾಗಿ ಜವಾಬ್ದಾರಿ ವಹಿಸಲಾಗಿದೆ.
ವೈಯಕ್ತಿಕ ಕಾರಣಗಳಿಂದಾಗಿ ತಮ್ಮನ್ನು ಈ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಹಿಂದಿನ ಎಸ್ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಶಶಿಕುಮಾರ್ ಅವರು ಕೋರಿದ ಹಿನ್ನೆಲೆಯಲ್ಲಿ ಈ ಮಹತ್ವದ ಬದಲಾವಣೆ ಮಾಡಲಾಗಿದೆ.
ಈ ಹೊಸ ತಂಡದಲ್ಲಿ ತನಿಖೆಯನ್ನು ಚುರುಕುಗೊಳಿಸಲು ಹಾಸನ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀನಿಧಿ ಅವರನ್ನು ಪ್ರಮುಖ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
- Advertisement -








