- Advertisement -
- Advertisement -





ಹಾಸನ: ಗೋವಾದಲ್ಲಿ ನ್ಯೂ ಇಯರ್ ಪಾರ್ಟಿಗೆ ಹೋಗಿದ್ದ ಯುವಕ ಹೃದಯಾಘಾತಕ್ಕೆ ಬಲಿ. ಮೃತರನ್ನು ಹಾಸನದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ರಕ್ಷಿತ್ (26) ಎಂದು ಗುರುತಿಸಲಾಗಿದೆ.
ಸಂಬಂಧಿಕರು ಹಾಗೂ ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಡಿ.31 ರಂದು ರಕ್ಷಿತ್ ಗೋವಾಗೆ ತೆರಳಿದ್ದರು. ಡಿ.31 ರಂದು ಗೋವಾದಲ್ಲಿ ನ್ಯೂ ಇಯರ್ ಪಾರ್ಟಿ ಮಾಡಿದ್ದರು. ಜ.1 ರಂದು ತಿಂಡಿ ಮುಗಿಸಿದ ರಕ್ಷಿತ್, ಚಿದಂಬರಂ ಹಾಗೂ ಪ್ರವೀಣ್ ಗೋವಾದಲ್ಲಿ ತಿರುಗಾಡುತಿರುವ ವೇಳೆ ರಕ್ಷಿತ್‌ಗೆ ದಿಢೀರ್ ಹೃದಯಾಘಾತವಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಜೊತೆಯಲ್ಲಿದ್ದವರು ಕರೆದೊಯ್ದಿದ್ದರು. ಅಷ್ಟರಲ್ಲಿ ರಕ್ಷಿತ್ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಗೋವಾದಿಂದ ಸ್ವಗ್ರಾಮಕ್ಕೆ ಮೃತದೇಹ ತಂದಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
- Advertisement -








