Wednesday, July 2, 2025
spot_imgspot_img
spot_imgspot_img

ದೇಶದಲ್ಲಿ ಮತ್ತೆ ಕೊರೊನಾ ಸ್ಪೋಟ – ಒಂದೇ ದಿನ 62,000ಕ್ಕೂ ಅಧಿಕ ಮಂದಿಗೆ ಸೋಂಕು ದೃಢ!

- Advertisement -
- Advertisement -

ನವದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 62,258 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,19,08,910ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 291 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,61,240ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,52,647 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,12,95,023 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 30,386 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 5,81,09,773 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

- Advertisement -

Related news

error: Content is protected !!