- Advertisement -
- Advertisement -
ನವದೆಹಲಿ: ದೇಶದಲ್ಲಿ ಕ್ರೂರಿ ಕೊರೊನಾ ದಿನೇ-ದಿನೇ ಶಾಕ್ ಕೊಡುತ್ತಿದೆ. ದೇಶವನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿರುವ ಕೊರೊನಾ ಕಳೆದ 24 ಗಂಟೆಯಲ್ಲಿ 32,695 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಹೀಗಾಗಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,68,876 ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಡೆಡ್ಲಿ ವೈರಸ್ 606 ಮಂದಿಯನ್ನು ಬಲಿಕೊಂಡಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 24,915ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಇನ್ನು ಕಳೆದ 24 ಗಂಟೆಯಲ್ಲಿ 20,783 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 6,12,815 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 3,31,146 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

- Advertisement -