- Advertisement -
- Advertisement -




ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮದುವೆಯಾಗಿ ವರ್ಷ ಕಳೆಯುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಗ್ರಾಮದಲ್ಲಿ ನಡೆದಿದೆ.
22 ವರ್ಷದ ಕಾವ್ಯ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹನುಮಂತರಾಜು ಎಂಬಾತನ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿ ಇಬ್ಬರೂ ಕಳೆದ ವರ್ಷ ಮದುವೆಯಾಗಿದ್ದರು
ಕಾವ್ಯ ಸಾವಿನ ಹಿಂದೆ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದೆ. ಗಂಡನ ಮನೆಯವರು 5 ಲಕ್ಷ ರೂ. ವರದಕ್ಷಿಣೆ ಹಣ ತರುವಂತೆ ಒತ್ತಡ ಹೇರುತ್ತಿದ್ದರು ಎಂದು ಮಹಿಳೆಯ ಮನೆಯವರು ಆರೋಪಿಸಿದ್ದಾರೆ. ಗಂಡ ಹನುಮಂತರಾಜು, ಅತ್ತೆ, ಮಾವ, ನಾದಿನಿಯರು ಹಾಗೂ ಅವರ ಗಂಡಂದಿರು ಕಾವ್ಯಗೆ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಬೇಕಿದೆ.
- Advertisement -








