Wednesday, September 16, 2026
spot_imgspot_img
spot_imgspot_img

ತುಮಕೂರಿನಲ್ಲಿ ಹಿಟ್ & ರನ್ ಗೆ ನವದಂಪತಿ ಸಾವು

- Advertisement -
- Advertisement -

ತುಮಕೂರು: ಹಿಟ್ & ರನ್‌ಗೆ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ.

ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದಂಪತಿ ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಮಂಗಳವಾರ ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!