Friday, June 19, 2026
spot_imgspot_img
spot_imgspot_img

ನ್ಯೂಯಾರ್ಕ್: ಟೈಮ್ಸ್ ಸ್ಕ್ವೇರ್‌ನಲ್ಲಿ ಗುಂಡಿನ ಸದ್ದು–ಶಂಕಿತನ ಬಂಧನ

- Advertisement -
- Advertisement -

ನ್ಯೂಯಾರ್ಕ್: ಜಗತ್ತಿನ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ರಸ್ತೆಯಲ್ಲಿ ಏಕಾಏಕಿ ಗುಂಡಿನ ಸದ್ದು ಕೇಳಿಬಂದಿದೆ. ಸ್ಥಳೀಯರು ಮತ್ತು ಪ್ರವಾಸಿಗರಿಂದ ಕಿಕ್ಕಿರಿದಿದ್ದ ವೇಳೆ ದಿಢೀರ್ ಗುಂಡಿನ ಶಬ್ದ ಕೇಳಿ ಬಂದಿದ್ದು, ಅಲ್ಲಿದ್ದ ಜನ ಹೆದರಿ ದಿಕ್ಕಾಪಾಲಾಗಿ ಓಡಿದ್ದಾರೆ.

ನ್ಯೂಯಾರ್ಕ್ ನಿಕ್ಸ್ ತಂಡದ ಐತಿಹಾಸಿಕ ಚಾಂಪಿಯನ್‌ಶಿಪ್ ಗೆಲುವಿನ ವಿಜಯೋತ್ಸವ ಮುಕ್ತಾಯಗೊಂಡ ಕೆಲವೇ ಗಂಟೆಗಳಲ್ಲಿ ಘಟನೆ ಸಂಭವಿಸಿದ್ದು, ತಂಡದ ಗೆಲುವನ್ನು ಸಂಭ್ರಮಿಸುತ್ತಿದ್ದ ಸಾರ್ವಜನಿಕರು ಹಾಗೂ ಪ್ರವಾಸಿಗರು ಈ ಭೀಕರ ಗುಂಡಿನ ಸದ್ದು ಕೇಳುತ್ತಿದ್ದಂತೆ ಪ್ರಾಣಭಯದಿಂದ ಸುರಕ್ಷಿತ ಸ್ಥಳಗಳಿಗೆ ಓಡಲಾರಂಭಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಗೊಂದಲ ಮತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಭದ್ರತಾ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಗುಂಡಿನ ಶಬ್ದ ಕೇಳುತ್ತಿದ್ದಂತೆ ಟೈಮ್ಸ್ ಸ್ಕ್ವೇರ್‌ನಲ್ಲಿದ್ದ ನೂರಾರು ಪ್ರವಾಸಿಗರು ಮತ್ತು ಸ್ಥಳೀಯರು ಹೆದರಿ ದಿಕ್ಕಾಪಾಲಾಗಿ ಓಡಿದ್ದಾರೆ. ಭದ್ರತಾ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ತಕ್ಷಣವೇ ಪೊಲೀಸರು ಶಂಕಿತನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಈ ದಾಳಿಯಲ್ಲಿ ಗಾಯಗೊಂಡ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!