Wednesday, April 24, 2024
spot_imgspot_img
spot_imgspot_img

ಮುಂದಿನ 2 ದಿನಗಳು ದಕ್ಷಿಣ ಕನ್ನಡ ಸೇರಿ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ; ಹವಾಮಾನ ಇಲಾಖೆ ಮುನ್ಸೂಚನೆ

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯ ಅಬ್ಬರ ಮುಂದುವರೆದಿರುವಾಗಲೇ, ಮತ್ತೆ ಮುಂದಿನ 2 ದಿನಗಳ ಕಾಲ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಾದ್ಯಂತ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಅವರು, ರಾಜ್ಯದಲ್ಲಿ ಮುಂದಿನ 2 ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದ್ದಾರೆ. ಜು.18ರವರೆಗೆ ಚಿಕ್ಕಮಗಳೂರು, ಕೊಡಗು, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ.16 ಮತ್ತು 17ರಂದು ಬೀದರ್, ಕಲಬುರ್ಗಿ, ಚಾಮರಾಜನಗರ, ಹಾವೇರಿ, ದಾವಣಗೆರೆ ಮತ್ತು ಯಾದಗಿರಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆಯಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!