




ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ ಐಎ ದಾಳಿಯಾಗಿದೆ.
ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು ರೂಪಿಸಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದ್ದು ಸಿಬ್ಬಂದಿ ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.
ಇನ್ನು ಮಾ. 5 ರಂದು ನಂದಾವರಕ್ಕೆ ಎನ್‌ಐಎ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಎನ್‌ಐಎ ತಂಡ ಒಟ್ಟು ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಸರ್ಫರಾಜ್ ನವಾಜ್ ಹಾಗೂ ಇಕ್ಬಾಲ್ ಎಂಬವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ತಿಳಿದುಬಂದಿದೆ. ನಾಲ್ವರ ಪೈಕಿ ಓರ್ವನನ್ನು ಬಂಧಿಸಿಲ್ಲ. ಇನ್ನು ಆರೋಪಿಗಳನ್ನು ಎನ್‌ಐಎ ತಂಡ ಕಸ್ಟಡಿಗೆ ಪಡೆದಿದ್ದು ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಪಟ್ನಾಕ್ಕೆ ಕರೆದೊಯ್ದಿದ್ದರು.