Wednesday, April 24, 2024
spot_imgspot_img
spot_imgspot_img

ಕರ್ನಾಟಕದಲ್ಲಿ ಡಿ.28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ

- Advertisement -G L Acharya panikkar
- Advertisement -
vtv vitla
vtv vitla

ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಮತ್ತೆ ನೈಟ್ ಕರ್ಫ್ಯೂಗೆ ಜನರು ಸಿದ್ಧರಾಗಬೇಕಾಗಿದೆ. ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಾದ ಈ ಹಿನ್ನೆಲೆ ಇಂದು (ಡಿ.26) ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ರಾಜ್ಯದಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿ ಘೋಷಿಸಿದ್ದಾರೆ. ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿ0ದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ ಎಂದಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಹಗಲಿನಲ್ಲೂ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಅಂತ ತಿಳಿಸಿದ್ದಾರೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ 50:50 ನಿಯಮ ಜಾರಿಗೊಳಿಸಿದ ಕರ್ನಾಟಕ ಸರ್ಕಾರ, ಸಿನಿಮಾ ಥಿಯೇಟರ್’ಗಳಿಗೆ ಸದ್ಯ ಈ ನಿಮಯ ಅನ್ವಯವಾಗಲ್ಲ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

- Advertisement -

Related news

error: Content is protected !!