Sunday, June 29, 2025
spot_imgspot_img
spot_imgspot_img

ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

- Advertisement -
- Advertisement -

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿ ಆತ್ಮಹತ್ಯಗೆ ಯತ್ನಿಸಿದವನು. ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈತ ಪತ್ರವೊಂದನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಇನ್ನು ‘ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ.

- Advertisement -

Related news

error: Content is protected !!