Sunday, June 29, 2025
spot_imgspot_img
spot_imgspot_img

ನಿರ್ಮಲಾ ಸೀತಾರಾಮನ್‌ ದಾಖಲೆಯ 8ನೇ ಬಜೆಟ್‌ ಮಂಡನೆ ಆರಂಭ

- Advertisement -
- Advertisement -

ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು ತಮ್ಮ ದಾಖಲೆಯ 8ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಸಂಸತ್‌ ಇತಿಹಾಸದಲ್ಲಿ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಈ ಮೂಲಕ ಪಾತ್ರರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟನ್ನು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದಾರೆ. ಬಜೆಟ್ ಮಂಡನೆ ಆರಂಭಿಸಿದ ಕೂಡಲೇ ವಿರೋಧ ಪಕ್ಷಗಳ ಗದ್ದಲ ಆರಂಭವಾಯಿತು.ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷಗಳಲ್ಲಿ ನಮ್ಮ ಬೆಳವಣಿಗೆಯ ದಾಖಲೆ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಗಮನವನ್ನು ಸೆಳೆದಿವೆ. ಕೃಷಿ ಬಜೆಟ್ 2025: ಪ್ರಧಾನ ಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ.

ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಹೇಳಿದ್ದಾರೆ.ಈ ಬಜೆಟ್‌ನಲ್ಲಿ ಬಡವರು, ಯುವಕರು, ರೈತರು, ಮಹಿಳೆಯರ ಅಭಿವೃದ್ಧಿ ಸೇರಿದಂತೆ ಒಟ್ಟು ಪ್ರಮುಖ 10 ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ. ಈ ಬಜೆಟ್‌ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು, ದೇಶೀಯ ಸೂಕ್ಷ್ಮಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

- Advertisement -

Related news

error: Content is protected !!