Sunday, July 26, 2026
spot_imgspot_img
spot_imgspot_img

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ -ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್.

- Advertisement -
- Advertisement -

ಹಾವೇರಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.

ಸಿಎಂ ಬದಲಾವಣೆ ವಿಚಾರಕ್ಕೆ ಮಾಲ್ಕು ತಿಂಗಳ ಹಿಂದೆ ಸಭೆಯಾಗಿತ್ತು, ಸುರೇಶ್ ಅಂಗಡಿ ಅವರನ್ನೆ ಮುಖ್ಯಮಂತ್ರಿ ಮಾಡುವ ಹಿನ್ನೆಲೆ ಎಂದು ಸುರೇಶ ಅಂಗಡಿಯವರ ಸೋದರ ಮಾವ ಲಿಂಗರಾಜ ಹೇಳಿಕೆ ನೀಡಿದ್ದರು‌. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲಾ, ಎಲ್ಲಿಯೂ ಮಾತುಕತೆಯಾಗಿಲ್ಲಾ, ಮುಂದಿನ ಮೂರುವರ್ಷ ಬಿಎಸ್ ವೈ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ‌.

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆ ಬಿಟ್ಡಿದ್ದು, ಸುರೇಶ್ ಅಂಗಡಿಯವರು ನನಗೆ ಬಹಳ ಆತ್ಮೀಯರು, ಅವರು ಎಂದು ನನ್ನ ಹತ್ತಿರ ಹೇಳಿಲ್ಲ ಎಂದರು. ಇನ್ನೂ ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ಪರವಾದ ಕಾಯ್ದೆ, ಅದರ ವಿರುದ್ಧ ಕಾಂಗ್ರೆಸ್ ರಾಜಕಾರಣ ಮಾಡಿದೆ. ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡಿದೆ ಎಂದು ತಿಳಿಸಿದರು.

- Advertisement -

Related news

error: Content is protected !!