Friday, April 26, 2024
spot_imgspot_img
spot_imgspot_img

ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ

- Advertisement -G L Acharya panikkar
- Advertisement -

ದಬಾಂಗ್, ರೌಡಿ ರಾಥೋರ್‌ ಬೆಡಗಿ ಹಿಂದಿ ಚಿತ್ರರಂಗದ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮತ್ತು ಇತರೆ ಗಾಸಿಪ್​ಗಳಿಂದ ಗಮನ ಸೆಳೆಯುತ್ತಿದ್ದ ಅವರು ಈಗ ಗಂಭೀರ ವಿಚಾರದಿಂದ ಸುದ್ದಿ ಆಗಿದ್ದಾರೆ. ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿದೆ. ದೆಹಲಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೊಂದರ ಆಯೋಜಕರಿಂದ ಲಕ್ಷಾಂತರ ರೂಪಾಯಿ ಪಡೆದುಕೊಂಡು ಕಾರ್ಯಕ್ರಮಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರು.

ಸೋನಾಕ್ಷಿ ಸಿನ್ಹಾ ಅವರು ಕಾರ್ಯಕ್ರಮಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದರು. ಮುಂಗಡವಾಗಿ ಪಡೆದಿದ್ದ ಹಣವನ್ನು ವಾಪಸ್​ ನೀಡಲು ಕೂಡ ಅವರು ಒಪ್ಪಿಕೊಂಡಿರಲಿಲ್ಲ. ಹಾಗಾಗಿ ಅವರ ವಿರುದ್ಧ ಕೇಸ್​ ದಾಖಲಾಗಿದೆ. ನಟಿಯಿಂದ ವಂಚನೆ ಆಗಿದೆ ಎಂದು ಆರೋಪಿಸಿ ಕಾರ್ಯಕ್ರಮದ ಆಯೋಜಕ ಪ್ರಮೋದ್​ ಶರ್ಮಾ ಎಂಬುವವರು ಕಾನೂನು ಹೋರಾಟ ಮಾಡುತ್ತಿದ್ದಾರೆ. ಈ ಪ್ರಕರಣದ ಸಂಬಂಧ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿದೆ. ಹಾಗಾಗಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

vtv vitla
vtv vitla
- Advertisement -

Related news

error: Content is protected !!