Friday, April 26, 2024
spot_imgspot_img
spot_imgspot_img

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ದಿನಾಂಕ ನಿಶ್ಚಯವಾಗಿಲ್ಲ: ಸುರೇಶ್ ಕುಮಾರ್

- Advertisement -G L Acharya panikkar
- Advertisement -

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ ಬಗ್ಗೆ ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಆದರೆ ಇದು ಸುಳ್ಳು ಸುದ್ದಿ ಎಂದು ಸಚಿವರು ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, ಫಲಿತಾಂಶದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಕಳೆದ ತಿಂಗಳು ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ಸಿ ಫಲಿತಾಂಶನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದರು.

ಕೊರೋನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿತ್ತು. ಜೂನ್ 25 ರಂದು 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇಕಡಾ 98 ರಷ್ಟು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು.

- Advertisement -

Related news

error: Content is protected !!