ಬಂಧನದ ವೇಳೆ ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನಿಸಿ ರಂಪಾಟ..!
ಕಬಾಬ್ ಮಾರುವ ಬೀದಿ ವ್ಯಾಪಾರಿಯನ್ನು ಬಿಜೆಪಿ ನಾಯಕನೆಂದು ಬಿಂಬಿಸಿ, RSSನ ನಾಯಕನೆಂದು ನಕಲಿ ವ್ಯಕ್ತಿಗೆ ವೇಷ ತೋಡಿಸಿ ಉದ್ಯಮಿಯನ್ನು ಚೈತ್ರಾ ಅಂಡ್ ಟೀಮ್ ಯಮಾರಿಸಿದ್ದು ಹೇಗೆ ಗೊತ್ತೆ..?
ಪ್ರಖ್ಯಾತ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ಗೆ ಕೊಡಿಸುವುದೆಂದು ಏಳು ಕೋಟಿ ಡೀಲ್ ಪ್ರಕರಣದಲ್ಲಿ ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಹಾಗೂ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾದ ಮುಖಂಡ ಸಹಿತ ನಾಲ್ವರು ಬಂಧನ ಪ್ರಕರಣದಲ್ಲಿ ಕಾಂಗ್ರೇಸ್ ನಾಯಕಿಗೆ ನೊಟೀಸ್ ಜಾರಿಯಾಗಿದೆ.
ಕಳೆದ ಏಳು ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಕಾಂಗ್ರೆಸ್ ಮಾಧ್ಯಮ ವಕ್ತಾರೆಯ ಮನೆಯಲ್ಲಿ ಅವಿತು ಕುಳಿತಿದ್ದರು ಎನ್ನಲಾಗಿದೆ. ಕಾಂಗ್ರೆಸ್ ನ ಮಾಧ್ಯಮ ವಕ್ತಾರೆ ಸುರೆಯ್ಯ ಅಂಜುಮ್ ಜಸೀಮ್ ರು ಡೀಲ್ ಪ್ರಕರಣದ ಆರೋಪಿ ಚೈತ್ರಾಗೆ ಆಶ್ರಯ ನೀಡಿದ್ದರು ಎನ್ನಲಾಗಿದೆ. ಸುರೆಯ್ಯ ಅಂಜುಮ್ ರ ಉಡುಪಿಯ ಅಪಾರ್ಟೆಂಟ್ ನಲ್ಲಿ ಚೈತ್ರಾ ಕುಂದಾಪುರ ಫೋನ್ ಸ್ವಿಚ್ ಆಫ್ ಮಾಡಿ ಕುಳಿತಿದ್ದ ಕಾಂಗ್ರೆಸ್ ಮಹಿಳಾ ನಾಯಕಿ ಸುರಯ್ಯ ಅಂಜುಂಗೆ ಸಿಸಿಬಿ ನೋಟೀಸ್ ನೀಡಿದ್ದು, ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ತಡರಾತ್ರಿ ಬಂಧಿತಳಾಗಿರುವ ಹಿಂದೂ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಹೈಡ್ರಾಮ ನಡೆಸಿರುವುದು ಬೆಳಕಿಗೆ ಬಂದಿದೆ. ಪ್ರಸ್ತುತ ಪೊಲೀಸರು ಆಕೆಯನ್ನು ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಯುದ್ದಕ್ಕೂ ರಂಪಾಟ ನಡೆಸಿರುವುದು ತಿಳಿದು ಬಂದಿದೆ. ಉಂಗುರ ನುಂಗಿ ಆತ್ಮಹತ್ಯೆಗೂ ಪ್ರಯತ್ನಿಸಿದ ಘಟನೆ ನಡೆದಿದೆ. ಅಲ್ಲದೆ ಆಕೆ ತನ್ನನ್ನು ಒಯ್ಯುತ್ತಿದ್ದ ಕಾರಿನ ಗಾಜನ್ನೂ ಒಡೆಯಲು ಪ್ರಯತ್ನಿಸಿದ್ದಾಗಿ ಸುದ್ದಿ ಬರುತ್ತಿದೆ. ಪ್ರಸ್ತುತ ಆಕೆಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದು, ಸಂಜೆ ನ್ಯಾಯಾಧೀಶರ ಮುಂದೆ ಹಾಜರಿಪಡಿಸುವ ಸಾಧ್ಯತೆಯಿದೆ.
ದೂರಿನಲ್ಲಿ ಏನಿದೆ..!
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲಿ ಬೈಂದೂರು ಕ್ಷೇತ್ರದಲ್ಲಿ ಗೋವಿಂದ ಬಾಬುರವನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಹಾಗೂ ಸ್ಪರ್ಧಿಸಿದರೆ ಗೆಲಿಸಿಕೊಡುವುದಾಗಿ ಆರೋಪಿ ಚೈತ್ರಾ ಅವರ ಮನವೊಲಿಸಿರುತ್ತಾಳೆ. ಬಿಜೆಪಿಯ ರಾಷ್ಟ್ರೀಯ ನಾಯಕರೊಂದಿಗೆ ನಿಕಟ ಸಂಪರ್ಕ ಇರುವ ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಗನ್ ಕಡೂರು ರವರನ್ನು ಭೇಟಿ ಮಾಡಿಸಿ ಈ ಮೂಲಕ ಟಿಕೆಟ್ ಕೊಡಿಸುವುದಾಗಿ ತಿಳಿಸಿದ್ದಾಳೆ.
ಸುಮಾರು 45 ವರ್ಷಗಳಿಂದ ಉತ್ತರ ಭಾರತದಲಿ RSS ಹಿರಿಯ ಪ್ರಚಾರಕರಾಗಿರುವ ಚಿಕ್ಕಮಗಳೂರು ಮೂಲದ ವಿಶ್ವನಾಥ್ ಜೀ ಮೂಲಕ ಶಿಫಾರಸು ಮಾಡಿಸುವುದಾಗಿ ನಂಬಿಸಿದ ಚೈತ್ರಾ ಗಗನ್ ಜೋಡಿ 04.07.2022 ರಂದು ವಿಶ್ವನಾಥ್ ಜೀ ರವರನ್ನು ಚಿಕ್ಕಮಗಳೂರಿನಲ್ಲಿಯೇ ಭೇಟಿ ಮಾಡಿಸಿ ಪರಿಚಯಿಸಿದರು. ಈ ವೇಳೆ ಬಯೋಡೆಟಾ ಪಡೆದುಕೊಂಡಿದ್ದು ನಾನು ಬಿಜೆಪಿ ಕೇಂದ್ರ ಆಯ್ಕೆ ಸಮಿತಿಯ ಸದಸ್ಯನಾಗಿದ್ದು RSS ಮತ್ತು ಬಿಜೆಪಿ ನಡುವಿನ ಸಮನ್ವಯಕಾರನಾಗಿದ್ದೇನೆ. ಟಿಕೆಟ್ ವಿಚಾರದಲ್ಲಿ ನನ್ನ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ನಂಬಿಸಿರುತ್ತಾರೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೆಂದು ಹೇಳಿಕೊಂಡ ‘ನಾಯ್ಕ’ ಎಂಬ ವ್ಯಕ್ತಿಯ ಬಗ್ಗೆ ಧನರಾಜ್ ಬಳಿ ವಿಚಾರಿಸಿದಾಗ ಇವರು ಬೆಂಗಳೂರಿನ ಕೆ.ಆರ್.ಪುರಂನಲಿ, ಚಿಕನ್ ಕಬಾಬ್ ತಯಾರಿಸುವ ಬೀದಿ ವ್ಯಾಪಾರಿ ಎಂಬ ಮಾಹಿತಿ ಸಿಗುತ್ತದೆ. ನಾಯ್ಕರನ್ನು ಭೇಟಿಯಾಗಿ ಕೇಳಿದಾಗ, ಬಿಜೆಪಿ ನಾಯಕನಾಗಿ ಪಾತ್ರ ಮಾಡಲು ತನಗೆ ಗಗನ್ ಕಡೂರು 93,000/-ರೂಪಾಯಿ ಪಾವತಿಸಿದ್ದು, ಈ ಹಿನ್ನೆಲೆಯಲ್ಲಿ ತಾನು ಈ ರೀತಿ ನಟಿಸಿರುವುದಾಗಿ ನಾಯ್ಕ ಹೇಳಿಕೊಂಡಿದ್ದಾರೆ. ಈ ವಿಚಾರಗಳನ್ನು ಬಹಿರಂಗಪಡಿಸಿದರೆ ಕೊಲೆ ಮಾಡಿಸುವುದಾಗಿ ಚೈತ್ರ ಕುಂದಾಪುರರವರು ಬೆದರಿಸಿರುತ್ತಾರೆ ಎಂದು ಹೇಳಿಕೊಂಡಿದ್ದಾರೆ.
ಚೈತ್ರಾ ಕುಂದಾಪುರ (ಉಡುಪಿ), ಗಗನ್ ಕಡೂರು (ಚಿಕ್ಕಮಗಳೂರು), ಅಭಿನವ ಹಾಲಾಶ್ರೀ ಸ್ವಾಮೀಜಿ (ಬಳ್ಳಾರಿ), ರಮೇಶ್ (ಚಿಕ್ಕಮಗಳೂರು), ನಾಯಕ್ (ಬೆಂಗಳೂರು), ಧನರಾಜ್ (ಚಿಕ್ಕಮಗಳೂರು), ಶ್ರೀಕಾಂತ್ (ಉಡುಪಿ), ಪ್ರಸಾದ್ ಬೈಂದೂರು (ಉಡುಪಿ) ಹೀಗೆ ಒಟ್ಟು ಎಂಟು ಮಂದಿಯ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.