Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ನರ್ಸ್ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನರ್ಸ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಗಂಡಿಬಾಗಿಲಿನ ದೇವಗಿರಿಯ ಬೈಕಾಟ್ ನಿವಾಸಿ ಜೋಸ್- ಮೆಡ್ಲಿ ದಂಪತಿ ಪುತ್ರಿ ಟಿನು(27) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಟಿನು ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಸೋಬಿಟ್ ಅವರೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತದೇಹವನ್ನು ಪತಿಯ ಮನೆಗೆ ಕೊಂಡೊಯ್ಯಲಾಗುವುದು ಎಂದು ಮನೆಯವರು ತಿಳಿಸಿದ್ದಾರೆ. ಅವರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!