- Advertisement -
- Advertisement -


ವಿಟ್ಲ: ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಕನ್ಯಾನದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನ್ಯಾನ ಮೆಸ್ಕಾಂ ಶಾಖಾಧಿಕಾರಿ ಸತೀಶ್ ಇವರು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಸಂಸ್ಥೆಯ ಪ್ರಾಚಾರ್ಯರು ಮಾತನಾಡುತ್ತಾ ತ್ಯಾಗ ಬಲಿದಾನದ ಪ್ರತೀಕವಾಗಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದೆ. ಅದನ್ನು ಉಳಿಸಿ ಸಹೋದರತೆ, ಸಮಾನತೆ ಹಾಗೂ ಸಾಮರಸ್ಯದಿಂದ ದೇಶವನ್ನುಕಟ್ಟಿ ಬೆಳೆಸೋಣ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಮೆಸ್ಕಾಂ ಸಿಬ್ಬಂದಿ ವರ್ಗದವರು ,ಹಾಗೂ ಒಡಿಯೂರು ಶ್ರೀ. ವಿ.ಸೌ.ಸ.ಸಂಘದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು ಉಪಸ್ಥಿತಿ ಇದ್ದರು. ಬಳಿಕ ಸಿಹಿತಿಂಡಿ ವಿತರಿಸಿ ಸಂಭ್ರಮಿಸಿದರು.
- Advertisement -








