Friday, May 17, 2024
spot_imgspot_img
spot_imgspot_img

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ದತ್ತ ಜಯಂತಿ ಮಹೋತ್ಸವ, ಶ್ರೀ ದತ್ತ ಮಹಾಯಾಗ ಸಪ್ತಾಹ ಹಾಗೂ ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮಕ್ಕೆ ಚಾಲನೆ

- Advertisement -G L Acharya panikkar
- Advertisement -

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿ.23ರಿಂದ ಡಿ.29ರ ವರೆಗೆ ನಡೆಯಲಿರುವ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸಾಮೀಜಿ ಅವರು ಆಶೀರ್ವಚನ ನೀಡಿದರು. ಸಾಧ್ವೀ ಮಾತಾನಂದ ಮಯೀ ದಿವ್ಯ ಸಾನಿಧ್ಯ ವಹಿಸಿದ್ದರು. ಷಷ್ಠ್ಯಬ್ದ ಕಾರ್ಯಕ್ರಮ ದ ಲಾಂಛನ, ಸಂಸ್ಥಾನದ ಮುಖವಾಣಿ ದತ್ತಪ್ರಕಾಶನ, ಸಂಸ್ಥಾನದ ಕ್ಯಾಲೆಂಡರ್, ಹಾಗೂ 20-21 ರ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು.

ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹದ ಆರಂಭ ನಡೆಯಿತು. ದತ್ತಮಾಲಾಧಾರಣೆ ನಡೆಯಿತು.

ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ವಾಮಯ್ಯ ಬಿ ಶೆಟ್ಟಿ ಚೆಂಬೂರು ಮುಂಬೈ, ರೇವತಿ ವಾಮಯ್ಯ ಶೆಟ್ಟಿ, ಕೃಷ್ಣ ಎಲ್ ಶೆಟ್ಟಿ ಮುಂಬೈ, ಅಶೋಕ್ ಕುಮಾರ್ ಬಿಜೈ, ಅಜಿತ್ ಕುಮಾರ್ ಪಂದಲಂ ತಿರುವನಂತಪುರ, ಮಂಗಳೂರು ವಲಯದ ಪ್ರಧಾನ ಕಾರ್ಯದರ್ಶಿ ತಾರಾನಾಥ ಶೆಟ್ಟಿ ಬೋಳಾರ್, ಖಜಾಂಜಿ ಸುರೇಶ್ ರೈ, ಮಂಗಳೂರು ವಲಯ ಸಂಚಾಲಕ ನಾಗರಾಜ ಆಚಾರ್ಯ, ಪುತ್ತೂರು ವಲಯ ಪ್ರಧಾನ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ, ನಗ್ರಿಗುತ್ತು ರೋಹಿತ್ ಶೆಟ್ಟಿ, ಲಿಂಗಪ್ಪ ಗೌಡ, ಸರ್ವಾಣಿ ಪಿ ಶೆಟ್ಟಿ, ನವನೀತ ಶೆಟ್ಟಿ ಕದ್ರಿ, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ನವನೀತ ಶೆಟ್ಟಿ ಕದ್ರಿ, ಮಲಾರ್ ಜಯರಾಮ ರೈ ಉಪಸ್ಥಿತರಿದ್ದರು.

- Advertisement -

Related news

error: Content is protected !!