Thursday, November 12, 2026
spot_imgspot_img
spot_imgspot_img

ಭ್ರಷ್ಟಾಚಾರ ಆರೋಪಿ ಅಧಿಕಾರಿಗೆ ಸಿಎಂ ಕಚೇರಿಯಲ್ಲಿ ಕರ್ತವ್ಯಾಧಿಕಾರಿ ಹುದ್ದೆ: ತೀವ್ರ ವಿವಾದ

- Advertisement -
- Advertisement -

ಮಂಡ್ಯ: ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯಾಗಿ ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಯೊಬ್ಬರನ್ನ ನೇಮಕ ಮಾಡಿರುವುದು ತೀವ್ರ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಹಶೀಲ್ದಾರ್ ಆಗಿದ್ದ ಕುಂ.ಞಿ ಅಹಮದ್ ನವೆಂಬರ್ 5 ರಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಕರ್ತವ್ಯ ವರದಿ ಮಾಡಿಕೊಂಡಿದ್ದು, ಇವರ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು ಹುದ್ದೆಯಿಂದ ವಜಾಗೊಳಿಸುವಂತೆ ಮಂಡ್ಯದ ಸಾಮಾಜಿಕ ಕಾರ್ಯಕರ್ತ ಕೆ.ಆರ್. ರವೀಂದ್ರ ಅವರು ರಾಜ್ಯಪಾಲರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ಕುಂ.ಞಿ ಅಹಮದ್ ಅವರು ಈ ಹಿಂದೆ ಮಂಡ್ಯ ಹಾಗೂ ನಾಗಮಂಗಲ ತಾಲೂಕುಗಳಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹಲವು ಗಂಭೀರ ಅಕ್ರಮಗಳನ್ನ ಎಸಗಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ನಾಗಮಂಗಲ ತಾಲೂಕಿನಲ್ಲಿ ಪ್ರಕೃತಿ ವಿಕೋಪ ಹಾಗೂ ಕೋವಿಡ್-19 ಪರಿಹಾರಕ್ಕೆ ಮೀಸಲಾಗಿದ್ದ ಸುಮಾರು 3 ಕೋಟಿಗೂ ಅಧಿಕ ಮೊತ್ತದ ಸರ್ಕಾರಿ ಅನುದಾನ ದುರುಪಯೋಗವಾಗಿರುವ ಆರೋಪ.

- Advertisement -

Related news

error: Content is protected !!