Monday, June 8, 2026
spot_imgspot_img
spot_imgspot_img

ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ; ಮೂವರು ಸಾವು..!

- Advertisement -
- Advertisement -

ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿ ನಡೆದಿದೆ.

ಮೃತಪಟ್ಟವರನ್ನು ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಎಂದು ಗುರುತಿಸಲಾಗಿದೆ.

ಮೃತರು ಹಾಗೂ ಗಾಯಾಳುಗಳು ಚನ್ನಗಿರಿ ತಾಲೂಕಿನ‌ ನಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಸಂತೆಬೆನ್ನೂರು ಕಡೆಯಿಂದ ಚನ್ನಗಿರಿಗೆ ಒಮಿನಿಯಲ್ಲಿ ಒಂದೇ ಕುಟುಂಬಸ್ಥರು ಹೋಗುವಾಗ ಎದುರಿಗೆ ಭತ್ತದ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ.

ಸ್ಥಳದಲ್ಲೇ ‌ಮೂವರು ಸಾವನ್ನಪ್ಪಿದ್ದು. ಗಾಯಾಳುಗಳಿಗೆ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ ಚನ್ನಗಿರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!