Monday, July 27, 2026
spot_imgspot_img
spot_imgspot_img

ಚಲಿಸುತ್ತಿದ್ದ ಒಮ್ನಿಯ ಮೇಲೆ ಮರ ಬಿದ್ದ ಪರಿಣಾಮ ಒಮ್ನಿ ಜಖಂ

- Advertisement -
- Advertisement -

ಕಡಬ: ಚಲಿಸುತ್ತಿದ್ದ ಒಮ್ನಿಯ ಮೇಲೆ ಮರವೊಂದು ಮುರಿದು ಬಿದ್ದ ಪರಿಣಾಮ ಒಮ್ನಿ ಜಖಂಗೊಂಡು ಅದರ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲ ಸಮೀಪದ ನೀರಾಜೆ ಎಂಬಲ್ಲಿ ಸೆ.12ರಂದು ಬೆಳಿಗ್ಗೆ ನಡೆದಿದೆ.

ಎಡೆಬಿಡದೆ ಸುರಿಯುತ್ತಿದ್ದ ಮಳೆಗೆ ಕೊಯಿಲ ನೀರಾಜೆ ಸಮೀಪ ರಸ್ತೆ ಬದಿಯಲ್ಲಿದ್ದ ಹಲಸಿನ ಮರವೊಂದು ಮುರಿದುಬಿದ್ದಿದೆ.

ಕೊಯಿಲದಿಂದ ಆತೂರಿಗೆ ಕೊಯಿಲ ಶ್ರೀರಾಮ ಎಲೆಕ್ಟ್ರಿಕಲ್ಸ್‌ನ ಮಾಲಕ ಯೋಗೀಶ್‌ರವರು ಚಲಾಯಿಸಿಕೊಂಡು ಹೋಗುತ್ತಿದ್ದ ಒಮ್ನಿ ಕಾರಿನ ಮೇಲೆಯೇ ಮರ ಮುರಿದು ಬಿದ್ದಿದೆ. ಘಟನೆಯಲ್ಲಿ ಒಮ್ನಿ ಜಖಂಗೊಂಡಿದ್ದು ಚಾಲಕ ಯೋಗೀಶ್‌ರವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮರ ರಸ್ತೆಗೆ ಮುರಿದು ಬಿದ್ದ ಪರಿಣಾಮ ಸುಮಾರು ಅರ್ಧತಾಸು ರಸ್ತೆಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳೀಯರು ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

- Advertisement -

Related news

error: Content is protected !!