Thursday, May 2, 2024
spot_imgspot_img
spot_imgspot_img

ಒನಕೆ ಓಬವ್ವ ಜಯಂತಿಗೆ ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ಇಂದು ಎಲ್ಲೆಡೆ ಒನಕೆ ಓಬವ್ವ ಜಯಂತಿಯನ್ನ ಆಚರಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ನವೆಂಬರ್ ೧೧ ದಿನಾಂಕವನ್ನು ಒನಕೆ ಓಬವ್ವ ಜಯಂತಿ ಎಂದು ಆಚರಿಸಲು ಗ್ರೀನ್ ಸಿಗ್ನಲ್ ನೀಡಿದೆ.

ಈ ಹಿನ್ನೆಲೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಒನಕೆ ಓಬವ್ವನ ಬಗ್ಗೆ ಬರೆದಿದ್ದಾರೆ. ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ

- Advertisement -

Related news

error: Content is protected !!