Friday, May 3, 2024
spot_imgspot_img
spot_imgspot_img

ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಮೃತ್ಯು..!

- Advertisement -G L Acharya panikkar
- Advertisement -

ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.

ಮೃತ ಬಾಲಕನನ್ನು ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್‍ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರಾಗಿದ್ದ ವೈಷ್ಣವ್ ಎಂದು ಗುರುತಿಸಲಾಗಿದೆ.

ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್‍ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್‍ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

- Advertisement -

Related news

error: Content is protected !!