Friday, November 20, 2026
spot_imgspot_img
spot_imgspot_img

ಸಾಮಾಜಿಕ ಜಾಲತಾಣದಲ್ಲಿ ಮನಸ್ಸಿಗೆ ಬಂದಂತೆ ಪೋಸ್ಟ್ ಮಾಡುವಂತಿಲ್ಲ: ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಸಾಮಾಜಿಕ ಜಾಲತಾಣದ ಖಾತೆ ಇದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ತಮಗೆ ಇಷ್ಟ ಬಂದ ಯಾವುದೇ ಸಂದೇಶವನ್ನು ಪೋಸ್ಟ್ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.

ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಮೂಲಕ ಮಾನಹಾನಿ ಮತ್ತು ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸುವ ಸಂದರ್ಭದಲ್ಲಿ ನ್ಯಾಯಾಲಯ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಶುಭಾ ಎಂಬುವವರ ಅರ್ಜಿಯನ್ನು ವಜಾಗೊಳಿಸುವ ವೇಳೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ವ್ಯಕ್ತಿಯೊಬ್ಬರು ತಮಗೆ ಬೇಕಾದ ಯಾವುದೇ ಸಂದೇಶವನ್ನು ಪೋಸ್ಟ್ ಮಾಡಲು ಮುಕ್ತ ಪರವಾನಗಿ ಸಿಕ್ಕಿದೆ ಎಂದು ಭಾವಿಸಬಾರದು.

ಪೋಸ್ಟ್ ಮಾಡುವ ಸಂದೇಶಗಳು ಸಂವಿಧಾನದ 19(1)(ಎ) ವಿಧಿಯಡಿ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿ ಹಾಗೂ ಮಿತಿಯೊಳಗೆ ಇರಬೇಕು ಎಂದು ನ್ಯಾಯಾಲಯ ಎಚ್ಚರಿಸಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!