- Advertisement -
- Advertisement -



ಕಡಬ: ಸಿಡಿಲು ಬಡಿದು ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ.
ನದಿಯಿಂದ ಮರಳು ತೆಗೆದು ಇಚ್ಚಂಪಾಡಿಯ ಕುರಿಯಾಳಕೊಪ್ಪ ಎಂಬಲ್ಲಿರುವ ಶೆಡ್‌ನಲ್ಲಿ ಕುಳಿತಿದ್ದ ವೇಳೆ ಸಿಡಿಲು ಬಡಿದು ಈ ಅನಾಹುತ ನಡೆದಿದೆ ಎಂದು ವರದಿಯಾಗಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಿದೆ
- Advertisement -








