Tuesday, December 3, 2024
spot_imgspot_img
spot_imgspot_img

ಮಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಓರ್ವ ಅರೆಸ್ಟ್‌

- Advertisement -
- Advertisement -

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್‌ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪುತ್ತೂರು ಹಾರಾಡಿಯ ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್‌. ಮೊಹಮ್ಮದ್‌ ಹಫೀಜ್‌ (23) ಬಂಧಿತ ಆರೋಪಿ.

ಈತನ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್‌ ಗಾಂಜಾ ಹಾಗೂ 75,000 ರೂ.ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್‌ ಫೋನ್‌, ಡಿಜಿಟಲ್‌ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ಅಂದಾಜು 30,85,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೈಡೋವೀಡ್ ಗಾಂಜಾವನ್ನು ವಿದೇಶದ ಥೈಲ್ಯಾಂಡ್‌ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುತ್ತದೆ. ಈ ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯಮುಂದುವರಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ. ಎಸ್ಸೆ ಶರಣಪ್ಪಭಂಡಾರಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ವರ್ಗವು ಪಾಲ್ಗೊಂಡಿತ್ತು.

- Advertisement -

Related news

error: Content is protected !!