Wednesday, May 15, 2024
spot_imgspot_img
spot_imgspot_img

ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಸಾಕ್ಷ್ಯ ನಾಶ ಪ್ರಕರಣ ದಾಖಲು .

- Advertisement -G L Acharya panikkar
- Advertisement -

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಇದೀಗ ಸಾಕ್ಷ್ಯ ನಾಶ ಪ್ರಕರಣ ದಾಖಲಾಗಿದೆ.

ಧಾರವಾಡ ಜಿಲ್ಲೆಯ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ವಿನಯ ಕುಲಕರ್ಣಿ ಸೇರಿದಂತೆ ಎಂಟು ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿದೆ.

ಅವರು ಈ ಹಿಂದೆ ಸಚಿವರಾಗಿದ್ದಾಗ ತಮ್ಮ ಪ್ರಭಾವ ಬಳಸಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಹಿರಿಯ ಪೊಲೀಸ್ ಅಧಿಕಾರಿಗಳ ಮೂಲಕ ರಾಜೀ ಸಂಧಾನಕ್ಕೆ ಯತ್ನಿಸಿದ್ದ ಆರೋಪದ ವಿಚಾರಣೆ ನಡೆಸಿದ ನ್ಯಾಯಾಲಯ ಅದನ್ನು ಮಾನ್ಯ ಮಾಡಿದೆ.
ಅಲ್ಲದೆ, ಮುಂದಿನ ವಿಚಾರಣೆ ಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದೆ.

ಮಾಜಿ ಸಚಿವ ವಿನಯ ಕುಲಕರ್ಣಿ, ಬಸವರಾಜ ಮುತ್ತಗಿ, ವಿಕಾಸ ಕಲಬುರಗಿ, ಈರಣ್ಣ ಮಲ್ಲಿಗವಾಡ, ಬಸಯ್ಯ ಹಿರೇಮಠ, ಬಾಬು ಕಟಗಿ, ಅಮಿತ್ ದೊಡ್ಡಮನಿ, ಲೋಗೆಂದ್ರ ಸಿ ಸಾಕ್ಷ್ಯ ನಾಶ ಮಾಡಿದ ಕುರಿತು ಪ್ರಕರಣ ದಾಖಲಿಸಲು ಅಧಿಕಾರಿಗಳವತಂಡ ಈ ಹಿಂದೆ
ಧಾರವಾಡ ಜಿಲ್ಲೆಯ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ
ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಈ ಬಗ್ಗೆ ಸ್ವತಃ ಯೋಗೀಶಗೌಡ ಗೌಡರ ಸಹೋದರ ಗುರುನಾಥ ಗೌಡ ಹಾಗೂ ತಾಯಿ ತುಂಗಮ್ಮ ನಿಂಗನಗೌಡರ ಹೈಕೋರ್ಟ್ ಮೆಟ್ಟಿಲು ಹತ್ತಿದ್ದರು. ಆಗ ಕೆಳ ನ್ಯಾಯಾಲಯ ದಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು.

- Advertisement -

Related news

error: Content is protected !!