- Advertisement -


- Advertisement -
ಬೆಂಗಳೂರು: ಈಗಾಗಲೇ ರಾಜ್ಯದ ಹಲವಾರು ಜಿಲ್ಲೆಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಈ ನಡುವೆ ಇನ್ನೂ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. 20 ಸೆಂ.ಮೀಗಿಂತಗಲೂ ಹೆಚ್ಚು ಮಳೆಯಾಗಿದೆ. ಹೀಗಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಆ. 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಲವಾದ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಆಯಾಯ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

- Advertisement -