Saturday, April 27, 2024
spot_imgspot_img
spot_imgspot_img

’ಆಪರೇಷನ್‌ ಅಜಯ್’; ಯುದ್ಧ ಪೀಡಿತ ಇಸ್ರೇಲ್‌ನಿಂದ ದೆಹಲಿಗೆ ಬಂದಿಳಿದ 212 ಭಾರತೀಯರು

- Advertisement -G L Acharya panikkar
- Advertisement -

ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ’ಆಪರೇಷನ್‌ ಅಜಯ್’ ಕಾರ್ಯಾಚರಣೆ ಆರಂಭಿಸಿದೆ. 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲಿನಿಂದ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ.

ಆಪರೇಷನ್ ಅಜಯ್ ಹೆಸರಿನಲ್ಲಿ ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಟೆಲ್ ಅವೀವ್‌ ನಗರದ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನದಲ್ಲಿ 211 ವಯಸ್ಕರು ಮತ್ತು ಒಂದು ಶಿಶು ಭಾರತಕ್ಕೆ ಆಗಮಿಸಿದ್ದಾರೆ.

ಈ ಪೈಕಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ಜಯಚಂದ್ರ ತಿಳಿಸಿದ್ದಾರೆ.

ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲಿ ಕಡೆಯಿಂದ ಪ್ರತೀಕಾರ ಕಾರ್ಯಾಚರಣೆ ನಡೆದಿದ್ದು 2,500ಕ್ಕೂ ಹೆಚ್ಚು ಜನರನ್ನು ಬಲಿಯಾಗಿದ್ದಾರೆ. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ. ಈ ನಡುವೆ, ಆತಂಕಕ್ಕೆ ಈಡಾದ ಭಾರತೀಯರನ್ನು ಕರೆತರಲು ಭಾರತ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.

- Advertisement -

Related news

error: Content is protected !!