Saturday, June 28, 2025
spot_imgspot_img
spot_imgspot_img

ಪುತ್ತೂರು ನಗರ ಪೊಲೀಸರ ಕಾರ್ಯಾಚರಣೆ; ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರ ಬಂಧನ..!

- Advertisement -
- Advertisement -

ಪುತ್ತೂರು: ಮಹಿಳೆಯೋರ್ವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಡಿ.19ರಂದು ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡಸಿದ್ದು, ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಎಂದು ಗುರುತಿಸಲಾಗಿದೆ. ಆರೋಪಪಿಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.

ಪುತ್ತೂರು: ಜ್ಯುವೆಲ್ಲರ್ಸ್ ಶಾಪ್‌ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋದ ಘಟನೆ ಡಿ.13 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್‌ನಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.19 ರಂದು ಜ್ಯುವೆಲ್ಲರ್ಸ್ ಮಾಲಕ ಶಿವಪ್ರಸಾದ್‌ ಭಟ್‌ ರವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂದು ಗುರುತಿಸಲಾಗಿದೆ. ಆರೋಪಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.

- Advertisement -

Related news

error: Content is protected !!