Sunday, July 26, 2026
spot_imgspot_img
spot_imgspot_img

ʻಆಪರೇಷನ್‌ ಸಿಂಧೂರʼ ಯಶಸ್ವಿ; ಭಾರತೀಯ ಸೇನೆ ಹೆಸರಿನಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆ- ಸಚಿವ ರಾಮಲಿಂಗಾರೆಡ್ಡಿ ಆದೇಶ

- Advertisement -
- Advertisement -

ಮಂಡ್ಯ: ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲ್ಲೆ, ಕರ್ನಾಟಕ ಸರ್ಕಾರವು (Karnataka Government) ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಮತ್ತು ಸಂಕಲ್ಪ ಮಾಡಲು ಆದೇಶಿಸಿದೆ.

ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಗೆ ದೇಶದಾದ್ಯಂತ ವಿಜಯೋತ್ಸವ ಆಚರಿಸಲಾಗಿದೆ. ರಾಜ್ಯ ಸರ್ಕಾರ ಭಾರತೀಯ ಸೇನೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

ಸಚಿವ ರಾಮಲಿಂಗಾರೆಡ್ಡಿ ಭಾರತೀಯ ಸೇನಾ ಕಾರ್ಯಾಚರಣೆಗೆ ಶುಭಾಶಯ ತಿಳಿಸಿ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ದೇವಾಲಯಗಳಿಗೂ ಸೂಚನೆ ನೀಡಲು ಮುಜರಾಯಿ ಇಲಾಖೆ ಆಯುಕ್ತರಿಗೆ ತಿಳಿಸಿದ್ದಾರೆ.

ಸೇನಾಪಡೆಗಳು ಬುಧವಾರ ಮುಂಜಾನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದವು. ಈ ಯಶಸ್ವಿ ಸೇನಾ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ದೇಶದ್ಯಾಂತ ನಾಗರಿಕರು ಸಂಭ್ರಮ ವ್ಯಕ್ತಪಡಿಸಿ ಸೇನೆಯ ಪರಾಕ್ರಮವನ್ನು ಕೊಂಡಾಡಿದ್ದಾರೆ.

- Advertisement -

Related news

error: Content is protected !!