Monday, June 22, 2026
spot_imgspot_img
spot_imgspot_img

’ಆಪರೇಷನ್‌ ಸಿಂಧೂರ’ ಯಶಸ್ವಿ; ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯಿಂದ ವಿಶೇಷ ಪ್ರಾರ್ಥನೆ, ಸಂಕಲ್ಪ ಪೂಜೆ

- Advertisement -
- Advertisement -

ಪುತ್ತೂರು: ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ “ಆಪರೇಷನ್ ಸಿಂಧೂರ” ಹೆಸರಿನಲ್ಲಿ ನಡೆದ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿರುವ ನಮ್ಮ ಹೆಮ್ಮೆಯ ಸೇನಾ ಯೋಧರಿಗೆ ಒಳಿತಾಗಲಿ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮುಜಿರಾಯಿ ಸಚಿವರ ಸೂಚನೆಯಂತೆ ವಿಶೇಷ ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆಯನ್ನು ನೆರವೇರಿಸಲಾಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕದಿಲಾಯ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ ವಿ, ಈಶ್ವರ ಬೆಡೇಕ‌ರ್, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ನಳಿನಿ ಪಿ ಶೆಟ್ಟಿ, ಕೃಷ್ಣವೇಣಿ, ಕಾರ್ಯನಿರ್ವಹಣಾಧಿಕಾರಿ ಕೆ ವಿ ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್‌ ಆಳ್ವ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

- Advertisement -

Related news

error: Content is protected !!