Thursday, July 23, 2026
spot_imgspot_img
spot_imgspot_img

ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​; ಕರವಾಳಿ, ಮಲೆನಾಡಲ್ಲಿ ಭಾರೀ ಮಳೆಯ ಮುನ್ಸೂಚನೆ

- Advertisement -
- Advertisement -

ಬೆಂಗಳೂರು: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗಲಿದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲೂ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕೀ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೀದರ್, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

- Advertisement -

Related news

error: Content is protected !!