Sunday, May 12, 2024
spot_imgspot_img
spot_imgspot_img

ಒಟಿಟಿ ವೇದಿಕೆ, ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

- Advertisement -G L Acharya panikkar
- Advertisement -

ನವದೆಹಲಿ: ಸಾಮಾಜಿಕ ಜಾಲತಾಣಗಳು, ಒಟಿಟಿ ವೇದಿಕೆಗಳು, ಹೊಸ ಸುದ್ದಿ ವೆಬ್‌ಸೈಟ್‌ಗಳ ಮೇಲೆ ಕೇಂದ್ರ ಸರಕಾರ ನಿರ್ಬಂಧ ಹೇರಲು ಮುಂದಾಗಿದ್ದು, ಈ ಕುರಿತು ಹೊಸ ನಿಯಮಾವಳಿಗಳ ಕರಡನ್ನು ಹೊರಡಿಸಿದೆ.

ಕೇಂದ್ರದ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಪತ್ರಿಕಾಗೋಷ್ಠಿ ನಡೆಸಿ ಹೊಸ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

2011ರಲ್ಲಿ ಇದ್ದ ನಿಯಮಾವಳಿಗಳನ್ನು ಬದಿಗೆ ಸರಿಸಿ ಈ ಹೊಸ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಇವು ಜಾರಿಯಾಗಲಿವೆ ಎಂದು ತಿಳಿದು ಬಂದಿದೆ.ಈ ನಿಯಮಗಳು ತಕ್ಷಣದಿಂದಲೇ ಜಾರಿಗೆ ಬರುತ್ತವೆ. ಸಾಮಾಜಿಕ ಮಾಧ್ಯಮದ ಪ್ರಮುಖ ಸಂಸ್ಥೆಗಳು (ಬಳಕೆದಾರರ ಸಂಖ್ಯೆಯ ಆಧಾರದಲ್ಲಿ) ಈ ನಿಯಮಗಳನ್ನು ಪಾಲಿಸಲು ಮೂರು ತಿಂಗಳ ಗಡುವು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವರು, ಪ್ರಮುಖ ಸಾಮಾಜಿಕ ಜಾಲತಾಣಗಳಿಗೆ ಬಿಗಿ ನಿಯಮಗಳು ಅನ್ವಯವಾಗಲಿದ್ದು, ಒಟಿಟಿ ಮತ್ತು ಸುದ್ದಿ ವೆಬ್‌ಸೈಟ್‌ ಗಳು ಈ ನಿಯಮಗಳ ಅಡಿಯಲ್ಲಿ ಬರಲಿವೆ. ಸಾಮಾಜಿಕ ಜಾಲತಾಣಗಳು ಇನ್ನು ಮುಂದೆ ಮಾಹಿತಿ ಪ್ರಸಾರ ವ್ಯವಸ್ಥೆಯಂತೆ ಪರಿಗಣನೆಯಾಗಲಿದ್ದು, ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಹೇಳಿದ್ದಾರೆ.

ನಿಯಮ ಪಾಲನಾ ಅಧಿಕಾರಿ ನೇಮಕ ಮಾಡಬೇಕು. ಸಾಮಾಜಿಕ ಮಾಧ್ಯಮಗಳಿಗೆ ಅನ್ವಯವಾಗುವ ಎಲ್ಲಾ ನಿಯಮಗಳ ಪಾಲನೆಯ ಹೊಣೆ ಈ ಅಧಿಕಾರಿಯದ್ದು, ಪ್ರಧಾನ ಸಂಪರ್ಕ ಅಧಿಕಾರಿಯನ್ನು ನೇಮಕ ಮಾಡಬೇಕು. ಸರ್ಕಾರಕ್ಕೆ ಬಂದಿರುವ ದೂರುಗಳ ಕುರಿತು ಸಾಮಾಜಿಕ ಮಾಧ್ಯಮಗಳ ಮಧ್ಯಸ್ಥ ಸಂಸ್ಥೆಯನ್ನು ಸಂಪರ್ಕಿಸಲು ಪ್ರಧಾನ ಸಂಪರ್ಕ ಅಧಿಕಾರಿಯು ದಿನದ 24 ಗಂಟೆಯೂ ಲಭ್ಯವಿರಬೇಕು. ದೂರು ಪರಿಹಾರ ಅಧಿಕಾರಿಯನ್ನು ನೇಮಕ ಮಾಡಬೇಕು. ಈ ಎಲ್ಲ ಅಧಿಕಾರಿಗಳು ಭಾರತದಲ್ಲಿಯೇ ನೆಲೆಸಿರಬೇಕು ಎಂದು ಹೇಳಲಾಗಿದೆ.

- Advertisement -

Related news

error: Content is protected !!