Tuesday, May 21, 2024
spot_imgspot_img
spot_imgspot_img

ಉಡುಪಿ: ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ- ಬೈಕ್‌ ಸವಾರ ಮೃತ್ಯು

- Advertisement -G L Acharya panikkar
- Advertisement -

ಉಡುಪಿ: ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ಸಂಭವಿಸಿದೆ.

ಮೃತನನ್ನು ಸ್ವಸ್ತಿಕ್ (21) ಎಂದು ಗುರುತಿಸಲಾಗಿದೆ.

ಇಂದು ಮುಂಜಾನೆ ಸ್ವಸ್ತಿಕ್ ತನ್ನ ಬೈಕ್‌ನಲ್ಲಿ ಉಡುಪಿ ಕಡೆಗೆ ಬರುವ ಸಂಧರ್ಭದಲ್ಲಿ, ನಿಟ್ಟೂರಿನ ಹುಂಡೈ ಶೋರೂಮ್ ಬಳಿ ಬರುತ್ತಿದ್ದಂತೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಗಂಭಿರವಾಗಿ ಗಾಯಗೊಂಡಿದ್ದ ಸ್ವಸ್ತಿಕ್ ನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಧ್ಯಾಹ್ನದ ವೇಳೆಗೆ ಆತ ಮೃತಪಟ್ಟಿದ್ದಾನೆ. ಘಟನೆಯ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿದೆ.

- Advertisement -

Related news

error: Content is protected !!