Tuesday, July 21, 2026
spot_imgspot_img
spot_imgspot_img

ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು!

- Advertisement -
- Advertisement -

ಮೂಡಬಿದಿರೆ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಬಳಿ ಇಂದು ನಡೆದಿದೆ.

ಪಕ್ಷಿಕೆರೆಯಿಂದ ಮೂಡುಬಿದಿರೆಯ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರು, ಪಕ್ಷಿಕೆರೆಯಿಂದ ಮೂಡುಬಿದಿರೆಯ ಕಡೆಗೆ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ. ಮೂಲಗಳ ಪ್ರಕಾರ, ಬೆಳಗಿನ ಜಾವ ಸುರಿದ ಮಳೆಯ ನಂತರ ರಸ್ತೆಯಲ್ಲಿ ಎಣ್ಣೆಯ ಅವಶೇಷಗಳು ಕಂಡುಬಂದಿವೆ.

ತಿರುವು ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿಯಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ, ಅಪಘಾತದಲ್ಲಿ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!