Wednesday, September 2, 2026
spot_imgspot_img
spot_imgspot_img

2016ರಿಂದ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಅಧಿಕ ದೂರು ಸ್ವೀಕಾರ: ಲೋಕಸಭೆಗೆ ತಿಳಿಸಿದ ಕೇಂದ್ರ ಸರಕಾರ

- Advertisement -
- Advertisement -

ಹೊಸದಿಲ್ಲಿ,: 2016ರಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿ ಹಾಲಿ ನ್ಯಾಯಾಧೀಶರ ವಿರುದ್ಧ 8,600ಕ್ಕೂ ಅಧಿಕ ದೂರುಗಳನ್ನು ಸ್ವೀಕರಿಸಿದೆ ಎಂದು ಲೋಕಸಭೆಗೆ ಶುಕ್ರವಾರ ಮಾಹಿತಿ ನೀಡಲಾಯಿತು.

ಲೋಕಸಭೆಗೆ ಲಿಖಿತ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘಾವಲ್, 2016 ಹಾಗೂ 2025ರ ನಡುವೆ ಹಾಲಿ ನ್ಯಾಯಾಧೀಶರ ವಿರುದ್ಧ 8,639 ದೂರುಗಳನ್ನು ಸ್ವೀಕರಿಸಲಾಗಿದೆ ಎಂದರು.

ಸಿಜೆಐ ಕಚೇರಿ 2024ರಲ್ಲಿ ಹಾಲಿ ನ್ಯಾಯಾಧೀಶರ ವಿರುದ್ಧ ಅತ್ಯಧಿಕ ದೂರು (1,170) ಗಳನ್ನು ಸ್ವೀಕರಿಸಿದೆ ಎಂದು ಅವರು ಹೇಳಿದರು.

ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ನ್ಯಾಯಾಧೀಶರ ವಿರುದ್ಧ ಸ್ವೀಕರಿಸಲಾದ ದೂರುಗಳನ್ನು ನ್ಯಾಯಾಂಗದ ಆಂತರಿಕ ವ್ಯವಸ್ಥೆಯ ಮೂಲಕ ನಿರ್ವಹಿಸಲಾಗಿದೆ ಎಂದು ತಿಳಿಸಿದರು.

- Advertisement -

Related news

error: Content is protected !!