Tuesday, July 28, 2026
spot_imgspot_img
spot_imgspot_img

ಆಕ್ಸಿಜನ್ ರೀಫಿಲ್ಲಿಂಗ್ ಘಟಕದಲ್ಲಿ ಸ್ಫೋಟ- ಮೂವರು ಸಾವು, ಐವರಿಗೆ ಗಂಭೀರ ಗಾಯ!

- Advertisement -
- Advertisement -

ಲಕ್ನೋ: ಆಕ್ಸಿಜನ್ ರೀಫಿಲ್ಲಿಂಗ್ ಘಟಕದಲ್ಲಿ ಉಂಟಾದ ಸ್ಫೋಟದಿಂದಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ವರದಿಯಾಗಿದೆ.

ಲಕ್ನೋದ ಚಿನ್ಹಾಟ್ ಎಂಬ ಪ್ರದೇಶದಲ್ಲಿ ಆಕ್ಸಿಜನ್ ರೀಫಿಲ್ಲಿಂಗ್ ಘಟಕವಿದ್ದು, ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ ಪರಿಣಾಮ ಮೂವರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆಯಲ್ಲಿ ತೊಡಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಮರಣ ಹೊಂದಿದವರು ಮತ್ತು ಗಾಯಗೊಂಡವರು ಆಕ್ಸಿಜನ್ ಘಟಕದ ಕಾರ್ಮಿಕರಾಗಿದ್ದು, ಘಟನೆಗೆ ಕಾರಣ ಏನೆಂದು ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!