Sunday, July 19, 2026
spot_imgspot_img
spot_imgspot_img

ವಿಧಾನ ಪರಿಷತ್‌ ಮಾಜಿ ಸದಸ್ಯ ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ

- Advertisement -
- Advertisement -

ಬೆಂಗಳೂರು: ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93) ಅವರು ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅಂಗಾಂಗ ವೈಫಲ್ಯದಿಂದಾಗಿ ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ.ಬಾಲಾಜಿ ತಿಳಿಸಿದ್ದಾರೆ.

1933ರ ಸೆ.12 ರಂದು ಜನಿಸಿದ ರಾಮಯ್ಯ ಅವರು, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು ಹಾಗೂ ಮೊಮ್ಮಕಳನ್ನು ಅಗಲಿದ್ದಾರೆ .

‘ದಿ ಹಿಂದೂ’ ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ ಅವರು, ವಿಧಾನ ಸಂಸತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು, ಪತ್ರಿಕಾ ಅಕಾಡೆಮಿ ಹಾಗೂ ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು . ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು.

ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್‌ ಸಮೀಪದಲ್ಲಿ ವಾಸವಾಗಿದ್ದ ಅವರ ಮನೆಯಲ್ಲಿ ಇಡಲಾಗುವುದು ಎಂದು ಡಾ.ಬಾಲಾಜಿ ತಿಳಿಸಿದ್ದಾರೆ.

- Advertisement -

Related news

error: Content is protected !!